ನವದೆಹಲಿ, ಏ.26 (DaijiworldNews/HR): ಪಶ್ಚಿಮ ಬಂಗಾಳದಲ್ಲಿ ಏಳನೇ ಹಂತದ ವಿಧಾನಸಭಾ ಚುನಾವಣೆ ಇಂದು ಐದು ಜಿಲ್ಲೆಗಳ 34 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಮತದಾನವು ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದೆ.
ಸಾಂಧರ್ಭಿಕ ಚಿತ್ರ
ಒಟ್ಟು 34 ವಿಧಾನಸಭಾ ಕ್ಷೇತ್ರಗಳೊಂದಿಗೆ. ಈ ಹಂತದಲ್ಲಿ, 86 ಲಕ್ಷಕ್ಕೂ ಹೆಚ್ಚು ಮತದಾರರು 284 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಇನ್ನು ಬಂಗಾಳದಲ್ಲಿ ಈ ಹಿಂದೆ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ವಿಶೇಷವಾಗಿ ಏಪ್ರಿಲ್ 10 ರಂದು ನಡೆದ ನಾಲ್ಕನೇ ಸುತ್ತಿನ ಮತದಾನದಲ್ಲಿ ಕೂಚ್ ಬೆಹರ್ ನಲ್ಲಿ ಐದು ಜನರು ಮೃತಪಟ್ಟ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದು ನಡೆಯುತ್ತಿರುವ ಚುನಾವಣೆ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, "ಇಂದು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ 7ನೇ ಹಂತದ ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಕೊರೊನಾ ನಿಯಮಗಳೊಂದಿಗೆ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಬೇಕು" ಎಂದು ಕರೆ ನೀಡಿದ್ದಾರೆ.