ನವದೆಹಲಿ, ಎ.26 (DaijiworldNews/PY): ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,52,991 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿಗೆ 2,800 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,92,311 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,69.60,172ಕ್ಕೆ ಏರಿಕೆ ಕಂಡಿದೆ.
ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ 1,40,85,110 ಮಂದಿ ಗುಣಮುಖರಾಗಿದ್ದಾರೆ. ಸದ್ಯ 26,82,751 ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,02,367 ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಈ ಮುಖೇನ ದೇಶದಲ್ಲಿ ಒಟ್ಟು 27,93,21,177 ಕೊರೊನಾ ಪರೀಕ್ಷೆಗಳನ್ನು ಮಾಡಲಾಗಿದೆ. ದೇಶದಲ್ಲಿ ಇಲ್ಲಿಯವರಗೆ 14,19,11,223 ಡೋಸ್ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.