ಬೆಂಗಳೂರು, ಏ 26(DaijiworldNews/MS): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಂಡಿದ್ದು ಏ.27 ರ ರಾತ್ರಿಯಿಂದ ಮುಂದಿನ 14 ದಿನಗಳ ಕಾಲ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ,.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, " ಕೋವಿಡ್- ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಮಹಾರಾಷ್ಟ್ರ ಮೀರಿಸಿ, ಬೆಂಗಳೂರು ಸುತ್ತಮುತ್ತ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿಸಂಪುಟದ ಸಹೋದ್ಯೋಗಿಗಳು, ತಜ್ಞರೊಂದಿಗೆ ಸಮಾಲೋಚಿಸಿ ಕೆಲವು ನಿರ್ಧಾರಕ್ಕೆ ಬರಲಾಗಿದ್ದು, ನಾಳೆ ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಲಾಕ್ ಡೌನ್ ಜಾರಿ ಬರಲಿದೆ. ನಾ5 ದಿನದ ಬಳಿಕವೂ ಪರಿಸ್ಥಿತಿ ಮತ್ತೆ ಹತೋಟಿಗೆ ಬಾರದಿದ್ದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆಯಾಗಲಿದೆ. ಜನಸಾಮಾನ್ಯರಿಗೆ ಅಗತ್ಯ ವಸ್ತು ಖರೀದಿಗೆ ತೊಂದರೆ ಆಗದಂತೆ ಬೆಳಿಗ್ಗೆ 6 ರಿಂದ 10 ಗಂಟೆ ನಡುವೆ ಅವಕಾಶ ನೀಡಲಾಗಿದೆ. ಉಳಿದಂತೆ ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರೆಯಲಿದೆ" ಎಂದು ಮಾಹಿತಿ ನೀಡಿದ್ದಾರೆ.
ಉಚಿತ ಲಸಿಕೆ: ಸರ್ಕಾರಿ ಆಸ್ಪತ್ರೆಯಲ್ಲಿ 18 ರಿಂದ 45 ವಯಸ್ಸಿನೊಳಗಿರುವ ಎಲ್ಲರಿಗೂ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ
ಇನ್ನು ಲಾಕ್ ಡೌನ್ ಅವಧಿಯಲ್ಲಿ ಸಾರಿಗೆ ಸಂಚಾರ ಇರುವುದಿಲ್ಲ. ಆದರೆ ಸರಕು- ಸಾಗಾಣಿಕೆ ವಾಹನಗಳಿಗೆ ಮಾತ್ರ ಈ ಅವಧಿಯಲ್ಲಿ ವಿನಾಯಿತಿ ನೀಡಲಾಗಿದೆ. ಮಾತ್ರವಲ್ಲದೆ. ಗಾರ್ಮೆಂಟ್ಸ್ ವಲಯ ಹೊರತುಪಡಿಸಿ, ಉತ್ಪಾದನಾ, ಕ್ಷೇತ್ರ, ಕೃಷಿ, ಕಟ್ಟಡ ವೈದ್ಯಕೀಯ ಚಟುವಟಿಕೆಗಳು ಮುಂದುವರೆಯಲಿದೆ ಎಂದು ಹೇಳಿದ್ದಾರೆ.