ಲಖನೌ, ಏ.26 (DaijiworldNews/HR): ಉತ್ತರ ಪ್ರದೇಶದಲ್ಲಿರುವ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯು ಕೊರೊನಾ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸದಂತೆ ಎಚ್ಚರಿಕೆ ವಹಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಬೆಡ್ ಲಭ್ಯವಿದ್ದಲ್ಲಿ ಯಾವ ಆಸ್ಪತ್ರೆಯೂ ದಾಖಲಾತಿ ನೀಡದೆ ರೋಗಿಗಳನ್ನು ವಾಪಸ್ ಕಳುಹಿಸುವಂತಿಲ್ಲ" ಎಂದು ಸಿಎಂ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇನ್ನುಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಲಭ್ಯವಿಲ್ಲದಿದ್ದಲ್ಲಿ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಬೇಕು, ಒಂದು ಪಕ್ಷ ಹೀಗೆ ಖಾಸಗಿ ಆಸ್ಪತ್ರೆಗೆ ಕಳುಹಿಸಲ್ಪಟ್ಟ ರೋಗಿಗೆ ಅಲ್ಲಿನ ವೆಚ್ಚವನ್ನು ಭರಿಸಲು ಸಾಧ್ಯವಿಲ್ಲದಿದ್ದಲ್ಲಿ, ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಆಯುಷ್ಮಾನ್ ಭಾರತ್ ಯೋಜನೆಯಡಿ ಅನುಮೋದಿಸಲ್ಪಟ್ಟ ದರಗಳಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹಣ ನೀಡಲಾಗುವುದು" ಎಂದು ಹೇಳಿದ್ದಾರೆ.