ಬೆಂಗಳೂರು, ಏ. 26 (DaijiworldNews/SM): ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಕಠಿಣ ನಿರ್ಧಾರ ಕೈಗೊಂಡಿದ್ದು, ಮಂಗಳವಾರದಿಂದ ೧೪ ದಿನಗಳ ಕಾಲ ಲಾಕ್ ಡೌನ್ ಘೋಷಣೆಯಾಗಿದೆ. ಈ ಸಂದರ್ಭದಲ್ಲಿ ಬಹುತೇಕ ಚಟುವಟಿಕೆಗಳು ಬಂದ್ ಆಗಿರಲಿವೆ. ಈ ಬಗ್ಗೆ ಹಲವು ಮಂದಿಯಲ್ಲಿ ಕುತೂಹಲವಿದ್ದು ಸರಕಾರ ಇಲ್ಲಿಯ ತನಕ ನೀಡಿರುವ ವಿವರ ಇಲ್ಲಿದೆ.
ಲಾಕ್ ಡೌನ್ ಸಂದರ್ಭ ಏನೆಲ್ಲಾ ಸಿಗಲಿದೆ?
ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ತನಕ ದಿನಸಿ, ಹಾಲು ಮತ್ತು ತರಕಾರಿ ಸೇರಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
10 ಗಂಟೆಯ ಬಳಿಕ ಎಲ್ಲಾ ವ್ಯಾಪಾರ ವಹಿವಾಟು ಸಂಪೂರ್ಣ ಬಂದ್.
ಆಟೋ ರಿಕ್ಷಾ, ಟ್ಯಾಕ್ಸಿ ಸಂಚಾರಕ್ಕೆ ಅವಕಾಶವಿಲ್ಲ.
ಗಾರ್ಮೆಂಟ್ ಉದ್ಯಮ ಹೊರತುಪಡಿಸಿ ಉಳಿದ ಎಲ್ಲ ಉತ್ಪಾದನಾ ಘಟಕಗಳ ಚಟುವಟಿಕೆಗೆ ಅವಕಾಶ ನೀಡಲಾಗಿದೆ.
ವೈದ್ಯಕೀಯ ಸೇವೆ, ಮೆಡಿಕಲ್ ಸ್ಟೋರ್, ಆಸ್ಪತ್ರೆಗಳು ಕಾರ್ಯನಿರ್ವಹಿಸಲಿವೆ.
ನಿರ್ಮಾಣ ವಲಯ, ಕೃಷಿ ವಲಯ, ಮಾಧ್ಯಮ ಮತ್ತು ಅಗತ್ಯ ಸೇವೆಗಳ ಚಟುಟಿಕೆಗೆ ಅವಕಾಶ ನೀಡಲಾಗಿದೆ.
ಅಂತರರಾಜ್ಯ ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ಎಲ್ಲಾ ಬಸ್ ಸಂಚಾರ ಇರುವುದಿಲ್ಲ.
ತುರ್ತು ಸೇವೆ ಬಿಟ್ಟು ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ.
ಬೆಂಗಳೂರು ಮೆಟ್ರೋ ರೈಲು ಸಂಚಾರ ಇಲ್ಲ.
6 ತಿಂಗಳು ಯಾವುದೇ ಚುನಾವಣೆ ಇರುವುದಿಲ್ಲ.
ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯೂ ಸೇರಿ ಎಲ್ಲ ಚುನಾವಣೆಗಳನ್ನು ಮುಂದೂಡಲು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ನೀಡಿದೆ.
ಹೊಟೇಲ್ ಗಳು, ಬಾರ್ ಗಳಿಂದ ಪಾರ್ಸೆಲ್ ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.