ಬೆಂಗಳೂರು , ಎ.28 (DaijiworldNews/PY): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರ 14 ದಿನಗಳ ಕಾಲ ನಿರ್ಬಧ ಹೇರಿದ್ದು, ಇದಕ್ಕೆ ಸಹಕರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡಿನ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಆತ್ಮೀಯ ನಾಗರಿಕ ಬಂಧುಗಳೇ, ಕೊರೋನಾ ಹರಡುವಿಕೆ ನಿಯಂತ್ರಣಕ್ಕಾಗಿ 2 ವಾರಗಳ ಕಟ್ಟುನಿಟ್ಟಿನ ನಿರ್ಬಂಧ ಪ್ರಾರಂಭವಾಗಿದೆ. ಎಲ್ಲರಲ್ಲೂ ನನ್ನ ಕಳಕಳಿಯ ಮನವಿಯೆಂದರೆ, ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ, ಸರ್ಕಾರದೊಂದಿಗೆ ಸಹಕರಿಸಿ, ಮನೆಯಲ್ಲೇ ಇರಿ, ತುರ್ತು ಪರಿಸ್ಥಿತಿ ಇದ್ದಲ್ಲಿ ಮಾತ್ರ ಹೊರಗೆ ಬನ್ನಿ. ನಾವೆಲ್ಲರೂ ಒಂದಾಗಿ ಕೊರೋನಾ ಮಣಿಸೋಣ" ಎಂದು ತಿಳಿಸಿದ್ದಾರೆ.