ನವದೆಹಲಿ, ಏ.28 (DaijiworldNews/MB) : ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕೇರ್ಸ್ ಫಂಡ್ನಿಂದ 1 ಲಕ್ಷ ಆಕ್ಸಿಜನ್ ಸಾಂದ್ರಕಗಳ ಖರೀದಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಧಾನಿ ಮೋದಿ ಅವರು, ''ಪಿಎಂ ಕೇರ್ಸ್ ಫಂಡ್ನಿಂದ 1 ಲಕ್ಷ ಆಮ್ಲಜನಕ ಸಾಂದ್ರಕಗಳನ್ನು ಸಂಗ್ರಹಿಸಲಾಗುವುದು, ಇನ್ನೂ 500 ಪಿಎಸ್ಎ ಆಮ್ಲಜನಕ ಸ್ಥಾವರಗಳನ್ನು ಮಂಜೂರು ಮಾಡಲಾಗುತ್ತದೆ. ಇದು ಆಮ್ಲಜನಕದ ಲಭ್ಯತೆಗೆ ಸಹಕಾರಿಯಾಗಲಿದೆ'' ಎಂದು ತಿಳಿಸಿದ್ದಾರೆ.
ಕೊರೊನಾ ನಿರ್ವಹಣೆಗೆ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (ಎಲ್ಎಂಒ) ಪೂರೈಕೆಯನ್ನು ಸುಧಾರಿಸಲು ಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಆಕ್ಸಿಜನ್ ಸಾಂದ್ರಕಗಳನ್ನು ಶೀಘ್ರವಾಗಿ ಸಂಗ್ರಹಿಸಿ, ಅಧಿಕ ಅವಶ್ಯಕತೆ ಇರುವ ರಾಜ್ಯಗಳಿಗೆ ಒದಗಿಸಬೇಕು ಎಂದು ಪಿಎಂ ಸೂಚನೆ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.