ಬೆಂಗಳೂರು, ಏ. 28 (DaijiworldNews/SM): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬುಧವಾರದಂದು 39,047 ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಇಲ್ಲಿಯ ತನಕ ಪತ್ತೆಯಾದ ಒಟ್ಟು ಪ್ರಕರಣಗಳ ಸಂಖ್ಯೆ 14,39,822ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು ಬರೋಬ್ಬರಿ 229 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಒಟ್ಟು ಕೋವಿಡ್ ಸಾವಿನ ಸಂಖ್ಯೆ 15,036ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು 22,596 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,10,347ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಬುಧವಾರದಂದು ಒಟ್ಟು 11,833 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 10,95,883ಕ್ಕೆ ಏರಿಕೆಯಾಗಿದೆ.