ಬೆಂಗಳೂರು, ಏ. 28 (DaijiworldNews/SM): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ಸೋಂಕಿತರು ನಾಪತ್ತೆಯಾಗುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಹೆಚ್ಚಿನ ಸೋಂಕಿತ ಜನರು ತಮ್ಮ ಫೋನ್ ಸ್ವಿಚ್ ಆಫ್ ಮಾಡಿದ್ದಾರೆ. ಈ ನಡುವೆ ಬೆಂಗಳೂರಿನಿಂದ ಕಾಣೆಯಾಗಿದ್ದಾರೆ. ಅಲ್ಲದೆ, ಬೆಂಗಳೂರು ಬಿಟ್ಟು ತೆರಳಿದ ಬಳಿಕ ಸುಮಾರು 3 ಸಾವಿರ ಜನರು ಈ ರೋಗವನ್ನು ಹರಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಾಣೆಯಾದವರಿಗಾಗಿ ಪೊಲೀಸ್ ಇಲಾಖೆ ಹುಡುಕಾಟ ನಡೆಸುತ್ತಿದ್ದಾರೆ ಎಂದರು.
ಇನ್ನು ಈಗಾಗಲೇ ಪಾಸಿಟಿವ್ ಬಂದ ಹಲವಾರು ಮಂದಿ ತಮ್ಮ ಮೊಬೈಲ್ ಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ. ಅಲ್ಲದೆ, ಅವರು ತಮ್ಮ ಇರುವಿಕೆಯ ಬಗ್ಗೆ ಯಾರಿಗೂ ತಿಳಿಸುತ್ತಿಲ್ಲ. ಇದರಿಂದಾಗಿ ಪರಿಸ್ಥಿತಿ ಹತೋಟಿಗೆ ತರಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಸುಮಾರು ಮೂರು ಸಾವಿರ ಮಂದಿ ಬೆಂಗಳೂರು ಬಿಟ್ಟಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.