ಬೆಂಗಳೂರು, ಏ. 29 (DaijiworldNews/SM): ರಾಜ್ಯದಲ್ಲಿ ಕೊರೋನಾ ತೀವ್ರ ಸ್ವರೂಪದಲ್ಲಿ ಹೆಚ್ಚಳವಾಗುತ್ತಿದೆ. ಗುರುವಾರದಂದು ದಾಖಲೆಯ 270 ಮಂದಿ ಸೋಂಕಿಗೆ ಬಲಿಯಾದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 15,306ಕ್ಕೆ ತಲುಪಿದೆ.
ಬುಧವಾರದ ರಿಪೋರ್ಟ್ ಪ್ರಕಟಗೊಂಡ ಬಳಿಕ ಗುರುವಾರ ಇಂದಿನ ಕೋವಿಡ್ ರಿಪೋರ್ಟ್ ಪ್ರಕಟಗೊಳ್ಳುವ ತನಕ 35,024 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಂದು 14,142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 11,10,025ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 19,637 ಮಂದಿಗೆ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,29,984ಕ್ಕೆ ತಲುಪಿದೆ.