ನವದೆಹಲಿ, ಎ.30 (DaijiworldNews/PY): ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆ ಸಾಂಕ್ರಾಮಿಕ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಎಪ್ರಿಲ್ 30ರ ಶುಕ್ರವಾರ ಕೇಂದ್ರ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕೇಂದ್ರ ಸಚಿವರು ಸೇರಿದಂತೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಭೆಯಲ್ಲಿ, ಕೇಂದ್ರ ಲಸಿಕೆಗಳ ಕೊರತೆ ಹಾಗೂ ಲಸಿಕೆಗಳಿಗೆ ಏಕರೂಪದ ಬೆಲೆ ನಿಗದಿಪಡಿಸುವ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.
ದೇಶದಲ್ಲಿ ಕೊರೊನಾ ಪರಿಸ್ಥಿತಿ ನಿಯಂತ್ರಣಕ್ಕೆ ಭಾರತೀಯ ಸೇನಾಪಡೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಅವರು ಚರ್ಚಿಸಲಿದ್ದಾರೆ ಎನ್ನಲಾಗಿದೆ.