ನವದೆಹಲಿ, ಏ.30 (DaijiworldNews/HR): ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸಾವುಗಳ ಸಂಖ್ಯೆಯು ಏರಿಕೆಯಾಗುತ್ತಿದ್ದು, 24 ಗಂಟೆಯಲ್ಲಿ ದೇಶದಲ್ಲಿ 3,86,452 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,498 ಮಂದಿ ಸಾವನ್ನಪ್ಪಿದ್ದಾರೆ.
ಸಾಂಧರ್ಭಿಕ ಚಿತ್ರ
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,87,62,976ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,08,330ಕ್ಕೆ ತಲುಪಿದೆ ಎನ್ನಲಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,97,540 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 1,53,84,418ಕ್ಕೆ ತಲುಪಿದೆ.
ಐಸಿಎಂಆರ್ ಮಾಹಿತಿ ಪ್ರಕಾರ, ಭಾರತದಲ್ಲಿ ಒಂದೇ ದಿನ 19,20,107 ಮಂದಿ ಕೊರೊನಾ ಪರೀಕ್ಷೆ ಮಾಡಿಸಿದ್ದು, ಈವರೆಗೂ 28,63,92,086 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎನ್ನಲಾಗಿದೆ.
ಇನ್ನು ದೇಶದಲ್ಲಿ ಒಟ್ಟು 15,22,45,179 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.