ನವದೆಹಲಿ, ಏ.30 (DaijiworldNews/HR): ಭಾರತದ ಖ್ಯಾತ ಕಾನೂನು ತಜ್ಞ, ಪದ್ಮವಿಭೂಷಣ ಪ್ರಶಸ್ತಿ ವಿಜೇತ, ಮಾಜಿ ಅಟಾರ್ನಿ ಜನರಲ್ ಸೋಲಿ ಸೊರಬ್ಜಿ(91ವರ್ಷ) ಕೊರೊನಾ ಸೋಂಕಿನಿಂದ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸೊರಾಬ್ಜಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
1930ರಲ್ಲಿ ಮುಂಬೈನಲ್ಲಿ ಜನಿಸಿದ್ದ ಪದ್ಮವಿಭೂಷಣ ಪ್ರಶಸ್ತಿ ವಿಜೇತ 1953ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿ ಬಳಿಕ 1971ರಲ್ಲಿ ಸುಪ್ರೀಂಕೋರ್ಟ್ ನ ಹಿರಿಯ ಕೌನ್ಸಿಲ್ ಆಗಿ ಪದೋನ್ನತಿ ಪಡೆದಿದ್ದರು.
ಇನ್ನು 1989-90ರ ಅವಧಿಗೆ ಮೊದಲ ಬಾರಿ ಅಟಾರ್ನಿ ಜನರಲ್ ಆಗಿ ನೇಮಕಗೊಂಡಿದ್ದ ಅವರು, 1998-2000 ಅವಧಿಗೆ ಅವರು ಭಾರತದ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದರು.