ಬೆಂಗಳೂರು, ಏ.30 (DaijiworldNews/HR): ರಾಜ್ಯದಲ್ಲಿ ಕೊರೊನಾ ಪ್ರಕರ್ಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯ ಸರ್ಕಾರವು ವಾಹನ ಮಾಲೀಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಿಸಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ ಮಾಡಲು ಸಾರಿಗೆ ಇಲಾಖೆ ಮುಂದಾಗಿದೆ.
ಇನ್ನು ಕರ್ನಾಟಕದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಅನ್ವಯಿಸುವಂತೆ ಸರ್ಕಾರದ ಅಧಿಸೂಚನೆಯನ್ನು ಹೊರಡಿಸಲಾಗಿದೆ.
15-04-2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ದಿನಾಂಕ 30-04-2021 ರ ವರೆಗೆ ವಿಸ್ತರಿಸಿದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
15-05-2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ದಿನಾಂಕ 31-05-2021 ರವರೆಗೆ ಅವಧಿಯನ್ನು ವಿಸ್ತರಿಸಿ ಇಲಾಖೆ ಆದೇಶಿಸಿದೆ.