ಮುಂಬೈ, ಎ.30 (DaijiworldNews/PY): ದೇಶಾದ್ಯಂತ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಈ ನಡುವೆ ಮಹಾರಾಷ್ಟ್ರದಲ್ಲಿ ದೇಶವೇ ಬೆಚ್ಚಿಬೀಳಿಸುವಂತ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಸ್ಮಶಾನದಲ್ಲಿ ಅರೆಬೆಂದ ಕೊರೊನಾ ಸೋಂಕಿತನ ಶವದ ಮಾಂಸವನ್ನು ತಿಂದ ಘಟನೆ ಸತಾರ ಜಿಲ್ಲೆಯ ಕೋಲಕಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸ್ಮಶಾದಲ್ಲಿ ವ್ಯಕ್ತಿಯೋರ್ವ ಅಡ್ಡಾಡುವುದನ್ನು ಸ್ಥಳೀಯರು ಗಮನಿಸಿದ್ದು, ನೋಡು ನೋಡುತ್ತಿದ್ದಂತೆಯೇ ಆ ಯುವಕ ಕೊರೊನಾ ಸೋಂಕಿತನ ಅರೆಬೆಂದ ಶವದ ಮಾಂಸವನ್ನು ತಿನ್ನುತ್ತಿದ್ದ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಕಂಡು ಶಾಕ್ ಅಗಿದ್ದಾರೆ ಈ ವೇಳೆ ಗ್ರಾಮಸ್ಥರು ಕೂಗಾಡುವುದನ್ನು ಕಂಡು ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ. ನಂತರ ಪೊಲೀಸರು ಆತನನ್ನು ಬೆನ್ನಟ್ಟಿದ್ದು, ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಸದ್ಯ ವ್ಯಕ್ತಿ ಮಾನಸಿಕ ಅಸ್ವಸ್ಥ ಎನ್ನಲಾಗಿದ್ದು, ಈ ಹಿನ್ನೆಲೆ ಆತನನ್ನು ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
"ವ್ಯಕ್ತಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು" ಎಂದು ಫಲ್ತಾನ್ ಮುನ್ಸಿಪಾಲ್ ಕಾರ್ಪೊರೇಷನ್ ಮುಖ್ಯಸ್ಥ ಪ್ರಸಾದ್ ಕಟ್ಕರ್ ಹೇಳಿದ್ದಾರೆ.