ನವದೆಹಲಿ, ಏ 30(DaijiworldNews/MS): ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧವನ್ನು ಮೇ 31ರವರೆಗೆ ವಿಸ್ತರಣೆ ಮಾಡಿರುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ದೇಶದಲ್ಲಿ ಕೊರೋನಾ ಸೋಂಕಿನ 2ನೇ ಅಲೆಯ ಅಬ್ಬರಿಸುತ್ತಿದ್ದು, ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಡಿಜಿಸಿಎ ಮೇ.31ರವರೆಗೆ ನಿಷೇಧವನ್ನು ಮುಂದುವರೆಸಿ ಆದೇಶಿಸಿದೆ.
ಆದರೆ ಈ ನಿರ್ಬಂಧ ವಂದೇ ಭಾರತ್ ಯೋಜನೆಯಲ್ಲಿ ಸಂಚರಿಸುವ ವಿಮಾನಗಳಿಗೆ ಹಾಗೂ ಸರಕು ವಿಮಾನ ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ.