ಬೀದರ್, ಎ.30 (DaijiworldNews/PY): "ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬಾರದೇ ಇದ್ದಲ್ಲಿ ರಾಜ್ಯದಲ್ಲಿ ಕರ್ಫ್ಯೂ ಮುಂದುವರೆಸುವುದು ಅನಿವಾರ್ಯ" ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಆಗಬೇಕಾದರೆ ಚೈನ್ ಬ್ರೇಕ್ ಮಾಡಬೇಕು. ಹಾಗಾಗಿ 14 ದಿನ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಕೊರೊನಾ ಸೋಂಕು ಪ್ರಕರಣಗಳು ನಿಯಂತ್ರಣಕ್ಕೆ ಬಾರದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ" ಎಂದಿದ್ದಾರೆ.
"ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಕೊಡುವ ಪ್ರಶ್ನೆಯೇ ಇಲ್ಲ. ಐಸಿಎಂಆರ್ ಪೋರ್ಟಲ್ನಲ್ಲಿ ಸೋಂಕಿತರ ಅಂಕಿ ಅಂಶಗಳನ್ನು ಹಾಕಬೇಕಾಗುತ್ತದೆ. ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದವರ ಸಂಖ್ಯೆಯನ್ನು ಸರ್ಕಾರ ಮುಚ್ಚಿಡುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದ ವಿಚಾರ. ಕೊರೊನಾ ಸೋಂಕಿನಿಂದ ಸಾವನ್ನಪ್ಪಿದರೆ ಪೋರ್ಟಲ್ ತಿಳಿಸುತ್ತದೆ. ಬೇರೆ ಸಮಸ್ಯೆಯಿಂದ ಸಾವನ್ನಪ್ಪಿದರೆ ಐಸಿಎಂಆರ್ನಲ್ಲಿ ಬರುವುದಿಲ್ಲ. ಮೊದಲು ತಾಂತ್ರಿಕ ಅಂಶಗಳನ್ನು ಅರ್ಥ ಮಾಡಿಕೊಳ್ಳುವುದು ಮುಖ್ಯ" ಎಂದು ತಿಳಿಸಿದ್ದಾರೆ.