ನವದೆಹಲಿ, ಏ.30 (DaijiworldNews/HR): ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ಸೋಂಕನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಅನೇಕ ಕಾರ್ಯತಂತ್ರಗಳನ್ನು ರೂಪಿಸಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಮಂತ್ರಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, "ಸಚಿವ ಸಂಪುಟ ಸಭೆಯಲ್ಲಿ ದೇಶದ ಕೊರೊನಾ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದ್ದು, ರಾಜ್ಯಗಳೊಂದಿಗೆ ಸಮನ್ವಯ, ವೈದ್ಯಕೀಯ ಸಾಮರ್ಥ್ಯವನ್ನು ಹೆಚ್ಚಿಸುವುದು ಮತ್ತು ಆಮ್ಲಜನಕದ ಲಭ್ಯತೆಯನ್ನು ಹೆಚ್ಚಿಸುವುದು ಸೇರಿದಂತೆ ಕೈಗೊಳ್ಳುತ್ತಿರುವ ಬೇರೆ ಬೇರೆ ಕ್ರಮಗಳ ಬಗ್ಗೆ ಚರ್ಚಿಸಲಾಯಿತು" ಎಂದಿದ್ದಾರೆ.
ಇನ್ನು ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,86,452 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ 2,97,540 ಜನ ಗುಣ ಮುಖರಾಗಿದ್ದಾರೆ. ಇದರಿಂದ ದೇಶದಲ್ಲಿ ಈವರೆಗೆ ಕೋವಿಡ್ ಸೋಂಕು ಪೀಡಿತರಾದವರ ಸಂಖ್ಯೆ 1,87,62,976ಕ್ಕೆ ಏರಿಕೆಯಾಗಿದೆ.