ಬೆಂಗಳೂರು, ಏ. 30 (DaijiworldNews/SM): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ತೀವ್ರ ಹೆಚ್ಚಳವಾಗಿದ್ದು, ಶುಕ್ರವಾರದಂದು ಇದೇ ಮೊದಲ ಬಾರಿಗೆ ಎಂಬಂತೆ 48,296 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ರಾಜ್ಯದಲ್ಲಿ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 15,23,142ಕ್ಕೆ ತಲುಪಿದೆ.
ಇನ್ನು ರಾಜ್ಯದಲ್ಲಿ ಶುಕ್ರವಾರದಂದು 217 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 15,523ಕ್ಕೆ ತಲುಪಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಂದು 14,884 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 11,24,909ಕ್ಕೆ ತಲುಪಿದೆ. ಇನ್ನು 3,82,690 ಸಕ್ರೀಯ ಪ್ರಕರಣಗಳಿವೆ.