ಹೊಸದಿಲ್ಲಿ, ಮೇ. 01 (DaijiworldNews/HR): ಪ್ರಧಾನಿ ನರೇಂದ್ರ ಮೋದಿಯವರು ಗುರು ತೇಜ್ ಬಹದ್ದೂರ್ ಅವರ 400 ನೇ ಜಯಂತಿಯ ಹಿನ್ನೆಲೆಯಲ್ಲಿ ಶನಿವಾರ ದೆಹಲಿಯ ಗುರುದ್ವಾರ ಸಿಸ್ ಗಂಜ್ ಸಾಹಿಬ್ಗೆ ಭೇಟಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಭದ್ರತೆಯಿಲ್ಲದೆ ಗುರುದ್ವಾರ ಸಿಸ್ ಗಂಜ್ ಸಾಹಿಬ್ಗೆ ಭೇಟಿ ನೀಡಿ, ಜನರ ನಡುವೆ ಪ್ರಧಾನಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಗುರು ತೇಜ್ ಬಹದ್ದೂರ್ ಅವರನ್ನು ಸ್ಮರಿಸಿದ ಪ್ರಧಾನಿ ಮೋದಿ, "400ನೇ ಪ್ರಕಾಶ್ ಪುರಬ್ ದಿನದಂದು ನಾನು ಶ್ರೀ ಗುರು ತೇಜ್ ಬಹದ್ದೂರ್ ಅವರಿಗೆ ತಲೆ ಬಾಗುತ್ತೇನೆ. ಅವರ ಧೈರ್ಯ ಮತ್ತು ದೀನ ದಲಿತರಿಗೆ ಸೇವೆ ಸಲ್ಲಿಸುವ ಗುಣಗಳಿಂದಾಗಿ ಜಾಗತಿಕವಾಗಿ ಅವರನ್ನು ಗೌರವಿಸಲಾಗುತ್ತದೆ. ಅವರ ಸರ್ವೋಚ್ಚ ತ್ಯಾಗ ಅನೇಕರಿಗೆ ಶಕ್ತಿ ಮತ್ತು ಪ್ರೇರಣೆ ನೀಡುತ್ತದೆ" ಎಂದು ಹೇಳಿದ್ದಾರೆ.