ಶಿವಮೊಗ್ಗ, ಮೇ 01 (DaijiworldNews/MB) : ರಾಜ್ಯ ಸರ್ಕಾರದ ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿ ಶುಕ್ರವಾರ ನಮಾಜ್ ಮಾಡಿದ ಕಾರಣಕ್ಕೆ ಪ್ರಕರಣ ದಾಖಲಿಸಿ 25 ಜನರನ್ನು ವಶಕ್ಕೆ ಪಡೆಯಲಾಗಿದೆ.
ಈ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಮಸೀದಿಯಲ್ಲಿ ನಡೆದಿದೆ. ಡಿವೈಎಸ್ಪಿ ವಿನಾಯಕ ಶೆಟಗೇರಿ ಹಾಗೂ ಸಾಗರ ನಗರ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳ ತಂಡ ಮಸೀದಿಯ ಮೇಲೆ ದಾಳಿ ನಡೆಸಿ 25 ಜನರನ್ನು ವಶಕ್ಕೆ ತೆಗೆದುಕೊಂಡಿದೆ.