ನವದೆಹಲಿ, ಮೇ.01 (DaijiworldNews/PY): ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ಕೊರೊನಾ ಸೋಂಕಿತರಿಗೆ ಸಹಾಯ ಮಾಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವೈದ್ಯಕೀಯ ಸಲಹಾ ಸಹಾಯವಾಣಿ ಆರಂಭಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಭಾರತ ಒಟ್ಟಾಗಿ ನಿಂತು ನಮ್ಮ ಜನರಿಗೆ ಸಹಾಯ ಮಾಡಬೇಕಾಗಿದೆ. ಹಾಗಾಗಿ ನಾವು ಹಲೋ ಡಾಕ್ಟರ್ ಎನ್ನುವ ವೈದ್ಯಕೀಯ ಸಲಹಾ ಸಹಾಯವಾಣಿಯನ್ನು ಆರಂಭಿಸಿದ್ದೇವೆ. ವೈದ್ಯಕೀಯ ಸಲಹೆಗಾಗಿ ದಯವಿಟ್ಟು +919983836838 ಗೆ ಕರೆ ಮಾಡಿ" ಎಂದಿದ್ದಾರೆ.
ವೈದ್ಯಕೀಯ ಅವಶ್ಯಕತೆ ಇರುವವರಿಗೆ ಸಹಾಯ ಮಾಡುವಂತೆ ವೈದ್ಯರಿಗೆ ಹಾಗೂ ವೈದ್ಯಕೀಯ ವೃತ್ತಿಪರರಿಗೆ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,01,993 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 19,164,969 ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಲ್ಲಿ 3,523 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,11,853 ಕ್ಕೆ ಏರಿಕೆಯಾಗಿದೆ.