ಅಹಮದಾಬಾದ್, ಮೇ. 01 (DaijiworldNews/HR): ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದಂತೆ ಸಾವನ್ನಪ್ಪುವರ ಸಂಖ್ಯೆಯು ಹೆಚ್ಚಾಗುತ್ತಿದ್ದು, ಅಂತಾರಾಷ್ಟ್ರೀಯ ಬಾಡಿಬಿಲ್ಡರ್ ಮತ್ತು ಮಿಸ್ಟರ್ ಇಂಡಿಯಾ ಜಗದೀಶ್ ಲ್ಯಾಡ್(34) ಗುಜರಾತ್ನ ವಡೋದರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಜಗದೀಶ್ ಲಾಡ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬಳಿಕ ವಡೋದರಾ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಆಕ್ಸಿಕನ್ ಸಪೋರ್ಟ್ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಜಗದೀಶ್ ಸಾವನ್ನಪ್ಪಿದ್ದಾರೆ.
ಇನ್ನು ಲಾಡ್ ಅವರು ಅನೇಕ ದೇಹದಾರ್ಢ್ಯ ಸ್ಪರ್ಧೆಗಳಲ್ಲಿ ಮಹಾರಾಷ್ಟ್ರ ಮತ್ತು ಭಾರತವನ್ನು ಪ್ರತಿನಿಧಿಸಿದ್ದು, ಮಿಸ್ಟರ್ ಇಂಡಿಯಾ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಅವರು, ವಿಶ್ವ ಚಾಂಪಿಯನ್ ಶಿಪ್ನಲ್ಲಿ ಬೆಳ್ಳಿ ಪದಕ ಸೇರಿದಂತೆ ಅನೇಕ ಬಹುಮಾನಗಳನ್ನು ಗೆದ್ದಿದ್ದಾರೆ.