ನವದೆಹಲಿ, ಮೇ. 01 (DaijiworldNews/HR): ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ದೆಹಲಿಯ ಲಾಕ್ಡೌನ್ ಅನ್ನು ಇನ್ನೊಂದು ವಾರ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 27,000 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 375 ಸಾವುಗಳು ದಾಖಲಾಗಿವೆ.
ಸೋಮವಾರ ಬೆಳಿಗ್ಗೆ 5 ಗಂಟೆಗೆ ಕೊನೆಗೊಳ್ಳಲಿರುವ ಲಾಕ್ ಡೌನ್ ಅನ್ನು ಇದೀಗ ಒಂದು ವಾರ ವಿಸ್ತರಿಸಲಾಗಿದೆ.
ಇನ್ನು ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಲಸಿಕೆ ನೀಡಲಾಗುವುದು, 18 -45 ವರ್ಷದೊಳಗಿನವರಿಗೆ ಸೋಮವಾರದಿಂದ ಲಸಿಕೆ ನೀಡಿಕೆ ಆರಂಭವಾಗಲಿದೆ ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
18 ರಿಂದ 44 ವರ್ಷದೊಳಗಿನವರಿಗೆ ವ್ಯಾಕ್ಸಿನೇಷನ್ ನೀಡಿಕೆ ಕಾರ್ಯ ಒಂದು ಕೇಂದ್ರದಲ್ಲಿ ಆರಂಭವಾಗಿದ್ದು, ಇದು ಸಾಂಕೇತಿಕವಾಗಿದೆ. 4.5 ಲಕ್ಷ ಲಸಿಕೆಗಳು ಬಂದಿದ್ದು, ಎಲ್ಲಾ ಲಸಿಕಾ ಕೇಂದ್ರಗಳಿಗೂ ವಿತರಣೆಯಾಗುತ್ತಿದೆ. ರವಿವಾರ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಬರಲಿದ್ದು, ಬಳಿಕ ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು. ನೋಂದಣಿ ಮಾಡಿಕೊಂಡವರು ಮಾತ್ರ ಲಸಿಕ ಕೇಂದ್ರಕ್ಕೆ ಬರಬೇಕು ಎಂದು ಅವರು ಮನವಿ ಮಾಡಿದ್ದಾರೆ.