ಕಲಬುರಗಿ, ಮೇ 01 (DaijiworldNews/SM): ಕೋವಿಡ್ ಸೋಂಕಿತರ ಚಿಕಿತ್ಸೆಗೆ ರೆಮಿಡಿಸಿವಿರ್ ಇಂಜೆಕ್ಷನ್ ಗೆ ಬೇಡಿಕೆ ಹೆಚ್ಚಳವಾಗಿದೆ. ಆದರೆ, ಇದನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಾರೆ. ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗುವುದೆಂದು ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರೆಮಿಡಿಸಿವಿರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುವಂತಿಲ್ಲ. ಒಂದೊಮ್ಮೆ ಅಂತಹ ಪ್ರಕರಣಗಳು ಕಂಡು ಬಂದಲ್ಲಿ ಅಂಥವರ ವಿರುದ್ಧ ಎಫ್.ಐ.ಆರ್. ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಕೊರೊನಾ ಪೀಡಿತರಿಗೆ ಚಿಕಿತ್ಸೆಗೆ ಇತ್ತೀಚೆಗೆ ರೆಮಿಡಿಸಿವಿರ್ ಬಳಕೆಗೆ ಭಾರಿ ಬೇಡಿಕೆ ಇದೆ. ಇದನ್ನೇ ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಇನ್ನು ಮುಂದೆ ಇಂತಹ ಘಟನೆಗಳು ನಡೆದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.