ಬೆಂಗಳೂರು, ಮೇ 01 (DaijiworldNews/SM): ರಾಜ್ಯದಲ್ಲಿ ಶನಿವಾರ ಒಟ್ಟು 40990 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿವೆ. ಇಂದು ಒಂದೇ ದಿನ ಕೊರೊನಾ ವೈರಸ್ ಸೋಂಕಿನಿಂದ 271 ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಇಂದು 18,341 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಲ್ಲಿಯ ತನಕ ಒಟ್ಟು 15,64,132 ಮಂದಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 11,24,909 ಸೋಂಕಿತರು ಗುಣಮುಖರಾಗಿದ್ದಾರೆ. 15,794 ಮಂದಿ ಸೋಂಕಿಗೆ ಬಲಿಯಾಗಿದ್ದು, 4,05,068 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕದಲ್ಲಿ ಪತ್ತೆಯಾದ ಒಟ್ಟು ಹೊಸ ಪ್ರಕರಣಗಳ ಪೈಕಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಬೆಂಗಳೂರಿನಲ್ಲೇ ದೃಢಪಟ್ಟಿದ್ದು, 19353 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.