ದೆಹಲಿ, ಮೇ 01 (DaijiworldNews/SM): ದೆಹಲಿಯಲ್ಲಿ ಎದುರಾಗಿರುವ ಆಮ್ಲಜನಕ ಕೊರತೆ ನೀಗಿಸಲು ತಕ್ಷಣ 490 ಮೆಟ್ರಿಕ್ ಟನ್ ಆಮ್ಲಜನಕ ಹಂಚಿಕೆ ಮಾಡಬೇಕು. ತಪ್ಪಿದ್ದಲ್ಲಿ ನ್ಯಾಯಾಂಗ ನಿಂದನೆಯನ್ನು ಎದುರಿಸಿ ಎಂದು ಕೇಂದ್ರ ಸರಕಾರಕ್ಕೆ ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಆಮ್ಲಜನಕ ಸಿಗದೆ ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಈ ಬಗ್ಗೆ ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ ಕೇಂದ್ರ ಸರಕಾರವನ್ನು ತರಾಟೆಗೆತ್ತಿಕೊಂಡಿದೆ. "ದೆಹಲಿಯಲ್ಲಿ ಸಾಯುತ್ತಿರುವ ಜನರನ್ನು ನಾವು ಕಣ್ಣುಮುಚ್ಚಿ ನೋಡುತ್ತಿರುತ್ತೇವೆ ಎಂದು ನೀವು ಭಾವಿಸಿದ್ದೀರಾ?" ಎಂದು ಕೋರ್ಟ್ ಕೇಂದ್ರವನ್ನು ಸರಕಾರವನ್ನು ಟೀಕಿಸಿದೆ.