ಪಶ್ಚಿಮ ಬಂಗಾಳ, ಮೇ.02 (DaijiworldNews/HR): ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಕುತೂಹಲ ಮೂಡಿಸಿದ್ದು, ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ಮತದಾನ ನಡೆದಿದ್ದು, ಇಂದು ಮತ ಎಣಿಕೆ ನಡೆಯುತ್ತಿದೆ.
ಸಾಂಧರ್ಭಿಕ ಚಿತ್ರ
ಬಿಜೆಪಿಯು ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಬಿರುಸಿನ ಪ್ರಚಾರವನ್ನು ನಡೆಸಿದ್ದು, ವಿಧಾನಸಭೆ ಚುನಾವಣೆ ಕುರಿತು ರಾಷ್ಟ್ರಮಟ್ಟದಲ್ಲಿ ಕುತೂಹಲ ಮೂಡುವಂತೆ ಮಾಡಿದೆ.
ಇನ್ನು ಪಶ್ಚಿಮ ಬಂಗಾಳದಲ್ಲಿ ಕೂಡ ಪ್ರಧಾನಿ ಮೋದಿ ಅಥವಾ ದೀದಿ ಹ್ಯಾಟ್ರಿಕ್ ಬಾರಿಸಲಿದ್ದಾರೆಯೋ ಎಂದು ಜನರು ಕಾಯುತ್ತಿದ್ದಾರೆ. ಅಸ್ಸಾಂ ಮತ್ತು ಪುದುಚೇರಿಯಲ್ಲಿ ಚುನಾವಣೆ ಫಲಿತಾಂಶ ಕೂಡ ಇಂದು ಪ್ರಕಟವಾಗುತ್ತಿದೆ.