ನವದೆಹಲಿ, ಮೇ.02 (DaijiworldNews/PY): ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,92,488 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
"ಕಳೆದ 24 ಗಂಟೆಗಳಲ್ಲಿ 3,92,488 ಹೊಸ ಕೊರೊನಾ ಪ್ರಕರಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 19,557,457ಕ್ಕೆ ಏರಿಕೆಯಾಗಿದೆ. 3,689 ಮಂದಿ ಸೋಂಕಿಗೆ ಸಾವನ್ನಪ್ಪಿದ್ದು, ಒಟ್ಟು 2,15,542 ಕ್ಕೆ ಮಂದಿ ಸಾವನ್ನಪ್ಪಿದ್ದಾರೆ" ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
"ಇನ್ನು ಕಳೆದ 24 ಗಂಟೆಗಳಲ್ಲಿ 3,07,865 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 32 ಲಕ್ಷ ಕೊರೊನಾ ಸಕ್ರಿಯ ಪ್ರಕರಣಗಳಿವೆ" ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.