ಬೆಳಗಾವಿ, ಮೇ 2 (DaijiworldNews/MS): ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಹಾವು ಏಣಿ ಆಟ ನಡೆಯುತ್ತಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ದಿವಂಗತ ಸಚಿವ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಸುರೇಶ್ ಅಂಗಡಿ ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷವು ಸತೀಶ್ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಿತ್ತು.
ಸದ್ಯ ಬಿಜೆಪಿಯ ಅಭ್ಯರ್ಥಿ 21ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ, ಬಿಜೆಪಿಯ ಅಭ್ಯರ್ಥಿ ಮಂಗಳ ಅಂಗಡಿ 81,108 ಮತಗಳನ್ನು ಪಡೆದಿದ್ದರೇ, ಕಾಂಗ್ರೆಸ್ ನ ಅಭ್ಯರ್ಥಿ ಸತೀಶ್ ಜಾರಕಿಹೊಳಿಯವರು77,389 ಮತ ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಮೂರನೇ ಸ್ಥಾನದಲ್ಲಿ ಇದ್ದಾರೆ. ಈ ಮೂಲಕ ಬಿಜೆಪಿಯ ಅಭ್ಯರ್ಥಿ ಮಂಗಳಾ ಅಂಗಡಿ 4100 ಮತಗಳ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 2566 ಮತಗಟ್ಟೆಯಿದ್ದು. ಕ್ಷೇತ್ರದಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ 41,535 ಮತದಾರರಿದ್ದಾರೆ. 12,290 7,925 ಸೇವಾ ಮತದಾರರಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೆಳಗಾವಿ ಲೋಕಸಭಾ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 18,07,250. ಈ ಪೈಕಿ 9,08,103 ಪುರುಷರು ಮತ್ತು 8,99,091 ಮಹಿಳೆಯರು ಇದ್ದಾರೆ. ಇವರ ಪೈಕಿ ಶೇ. 55 ಮಂದಿ ಮತ ಚಲಾಯಿಸಿದ್ದರು. ಈ ಹಿಂದೆ 2019ರ ಲೋಕಸಭಾ ಚುನಾವಣೆಯಲ್ಲಿ ಶೇ. 67ರಷ್ಟು ಮತದಾನವಾಗಿತ್ತು.