ರಾಯಚೂರು, ಮೇ.02 (DaijiworldNews/PY): ಮತ ಎಣಿಕೆಯ ಮಾಹಿತಿಯನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಸಹೋದರ ಆಕ್ಷೇಪ ವ್ಯಕ್ತಪಡಿಸಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡು ಕೋಣೆಯಲ್ಲಿ ಕೂರಿಸಿರುವ ಘಟನೆ ನಡೆದಿದೆ.
ಕಾಂಗ್ರೆಸ್ ಅಭ್ಯರ್ಥಿ ತುರ್ವಿಹಾಳ ಸಹೋದರ ಸಿದ್ಧನಗೌಡ ತುರ್ವಿಹಾಳ ಅವರು ಕರ್ತವ್ಯನಿರತ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದು, ಈ ಸಂದರ್ಭ ಡಿಸಿ ಆರ್.ವೆಂಕಟೇಶಕುಮಾರ್ ಅವರನ್ನು ವಶಕ್ಕೆ ಪಡೆಯುವಂತೆ ಸೂಚಿಸಿದ್ದಾರೆ. ನಂತರ ಪೊಲೀಸರು ಅವರನ್ನು ನ್ಯೂಸ್ ರೂಂಗೆ ಕರೆದೊಯ್ದು ಕೂರಿಸಿದ್ಧಾರೆ.
ಈ ವೇಳೆ ಮಾತನಾಡಿದ ಸಿದ್ದನಗೌಡ, "ಮತ ಎಣಿಕೆಯ ಬಗ್ಗೆ ಮಾಹಿತಿ ಕೇಳಿದರೆ ಅಧಿಕಾರಿಗಳು ಸಮರ್ಪಕವಾದ ಮಾಹಿತಿ ನೀಡುತ್ತಿಲ್ಲ" ಎಂದು ಆರೋಪಿಸಿದ್ದಾರೆ.
ರಾಜ್ಯ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯುತ್ತಿದ್ದು, ಮಸ್ಕಿ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.