ಬೆಂಗಳೂರು,ಮೇ 2 (DaijiworldNews/MS): ಕೊನೆಗೂ 6 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬಾಕಿ ಉಳಿದಂತಹ ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ, ಕಲಬುರ್ಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಎಸ್-3) ಮಾಲತಿ ಸಿ ಅಧಿಸೂಚನೆ ಹೊರಡಿಸಿದ್ದಾರೆ.
ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಿದ್ದಾರೆ.
6 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರುಗಳ ಪಟ್ಟಿ ಇಂತಿದೆ.
ಬೆಳಗಾವಿ - ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ
ಚಿಕ್ಕಮಗಳೂರು - ಎಸ್ ಅಂಗಾರ
ಬಾಗಲಕೋಟೆ - ಉಮೇಶ್ ಕತ್ತಿ
ಬೀದರ್ -ಅರವಿಂದ ಲಿಂಬಾವಳಿ
ಕೋಲಾರ - ಎಂಟಿಬಿ ನಾಗರಾಜ್
ಕಲಬುರ್ಗಿ - ಮುರುಗೇಶ್ ನಿರಾಣಿ