ಬೆಂಗಳೂರು, ಮೇ 2 (DaijiworldNews/MS): ಚುನಾವಣೆಯ ಫಲಿತಾಂಶದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ "ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಪ್ರದರ್ಶನ ನೀಡಿದೆ" ಎಂದು ಹೇಳಿಕೆ ನೀಡಿದ್ದಾರೆ.
ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯ ವಿಚಾರವಾಗಿ ಮಾತನಾಡಿದ ನಳಿನ್, ಬಸವಕಲ್ಯಾಣದಲ್ಲಿ ಅಮೋಘ ಗೆಲುವಾಗಿದೆ, ಮಸ್ಕಿಯಲ್ಲಿ ನಮಗೆ ಹಿನ್ನಡೆಯಾಗಿದೆ, ಇನ್ನು ಬೆಳಗಾವಿಯಲ್ಲಿ ನಮ್ಮ ಅಭ್ಯರ್ಥಿ ಮಂಗಳಾ ಅಂಗಡಿ ವಿಜಯ ಸಾಧಿಸುವ ವಿಶ್ವಾಸವಿದೆ ಎಂದು ನುಡಿದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಅಲೆ ಕಡಿಮೆಯಾಗಿದೆ. ಬಿಜೆಪಿ ಪರ ಜನ ಒಲವು ತೋರಿಸಿದ್ದು, ಸೀಟು ಕಡಿಮೆ ಬಂದಿದ್ದರೂ ಮತ ಗಳಿಗೆಯಲ್ಲಿ ಬಿಜೆಪಿ ಅಗ್ರಸ್ಥಾನದಲ್ಲಿದೆ. ದೀದಿಯ ಪ್ರಭಾವ ಕಡಿಮೆಯಾಗಿರೋದು ಬಹಳ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.
ಅಸ್ಸಾಂನಲ್ಲಿ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಕಮಾಲ್ ಮಾಡಿದೆ. ಪುದುಚೇರಿಯಂತಹ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್ ಅನ್ನು ಜನದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿರುವುದು ಈ ಬಾರಿಯ ಫಲಿತಾಂಶದಲ್ಲಿ ಗೊತ್ತಾಗಿದೆ. ಕೇರಳದಲ್ಲೂ ಬಿಜೆಪಿ ಸಾಧನೆ ಕಡಿಮೆಯಿಲ್ಲ . ಕಳೆದ ಬಾರಿ ಚುನಾವಣೆಯಲಿ ಒಂದು ಸೀಟ್ ಗೆದ್ದುಗೊಂಡಿದ್ದು, ಈ ಭಾರಿ ಮೂರರಲ್ಲಿ ಮುನ್ನಡೆ ಸಾಧಿಸಿದ್ದೇವೆ. ಕೇರಳದಲ್ಲೂ ಜನ ಕಾಂಗ್ರೆಸ್ ಅನ್ನು ತಿರಸ್ಕಾರ ಮಾಡಿದ್ದಾರೆಂದು ಕಟೀಲ್ ಹೇಳಿದ್ದಾರೆ.