ದೆಹಲಿ, ಮೇ 2 (DaijiworldNews/MS): ಕೊರೋನವೈರಸ್ ಕಾರಣ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ತಂದೆ ನಿಧನ ಹೊಂದಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಸಚಿವ ಸತ್ಯೇಂದರ್ ಜೈನ್
ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ಪ್ರತಿದಿನ ದಾಖಲೆಯ ಮಟ್ಟದಲ್ಲಿ ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ನೂರಾರು ಜನರು ಮಹಾಮಾರಿ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಇದೀಗ ಆರೋಗ್ಯ ಸಚಿವರ ತಂದೆಯನ್ನು ಸಹ ಕೊರೊನಾ ಬಲಿ ಪಡೆದಿದೆ.
ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ತಂದೆ 56 ವರ್ಷದ ರಾಮ್ ಶರಣ್ ಜೈನ್ ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೊಳಗಾಗಿದ್ದರು. ಅವರನ್ನ ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ಸಿಎಂ ಕೇಜ್ರಿವಾಲ್ ಸಂತಾಪ ಸೂಚಿಸಿದ್ದಾರೆ.
ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿಧನದ ಬಗ್ಗೆ ದುಃಖ ವ್ಯಕ್ತಪಡಿಸಿದರು ಮತ್ತು ಈ ಕಠಿಣ ಸಮಯದಲ್ಲಿ ಇದು ನಮ್ಮೆಲ್ಲರಿಗೂ ಬಹಳ ನೋವಿನ ಸಂಗತಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.