ಬೆಂಗಳೂರು, ಮೇ 02 (DaijiworldNews/SM): ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳವಾಗಿದ್ದು, ರಾಜ್ಯದಲ್ಲಿ ರವಿವಾರದಂದು 37,733 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 16,01,865ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 217 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 16,011ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 21,149 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 11,64,398ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 4,21,436 ಸಕ್ರೀಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 21,199 ಮಂದಿಗೆ ಸೋಂಕು ದೃಢಪಟ್ಟಿವೆ.