ಚಾಮರಾಜನಗರ, ಮೇ. 03 (DaijiworldNews/HR): ದೇಶದಾದ್ಯಂತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ 20ಕ್ಕೂ ಅಧಿಕ ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ರವಿವಾರ ನಡುರಾತ್ರಿಯಲ್ಲಿ ಈ ಅವಘಡ ನಡೆದಿದ್ದು, ಘಟನ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಘಟನೆಯಲ್ಲಿ ಸಾವನ್ನಪ್ಪಿರುವವರು ನಾನಾ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳುತ್ತಿದ್ದು, ತನಿಖೆ ಬಳಿಕ ಮಾತ್ರ ಸತ್ಯ ತಿಳಿದು ಬರಳಿದೆ.
ಘಟನೆ ನಡೆದ ಬಳಿಕ ಆಸ್ಪತ್ರೆ ಮುಂದೆ ನೂರಾರು ಮಂದಿ ನೆರೆದಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.
ಇನ್ನು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,68,147 ಮಂದಿಯಲ್ಲಿ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,99,25,604ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಲ್ಲಿ 3,417 ಸೋಂಕಿತರು ಮೃತಪಟ್ಟಿದ್ದು, ಕೊರೊನಾದಿಂದ ಒಟ್ಟು ಮೃತಪಟ್ಟವರ ಸಂಖ್ಯೆ 2,18,959 ಕ್ಕೆ ಏರಿಕೆಯಾಗಿದೆ.