ಗುವಾಹಟಿ, ಮೇ 03 (DaijiworldNews/MB) : ಅಸ್ಸಾಂ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕಳಪೆ ಸಾಧನೆಗೆ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರ ರಾಜೀನಾಮೆ ನೀಡಿದ್ದಾರೆ.
ರಿಪುನ್ ಬೋರ ಅವರು ರಾಜ್ಯಸಭೆ ಸದಸ್ಯರಾಗಿದ್ದು, ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು, ಗೋಹ್ಪುರ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಅವರು, ಬಿಜೆಪಿ ಅಭ್ಯರ್ಥಿಯ ವಿರುದ್ಧ 29,294 ಮತಗಳ ಅಂತರದಿಂದ ಪರಾಭವಗೊಂಡಿದ್ದರು.
ಈ ಹಿನ್ನೆಲೆ ಕಳಪೆ ಸಾಧನೆಗೆ ನೈತಿಕ ಹೊಣೆ ಹೊತ್ತು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಿಪುನ್ ಬೋರ ಅವರು ಹಂಗಾಮಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
''ಪಕ್ಷದ ಹೀನಾಯ ಸೋಲಿಗೆ ನಾನು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ. ಶ್ರಮಪಟ್ಟರೂ ಬಿಜೆಪಿಯ ವಿಭಜನಕಾರಿ ಹಾಗೂ ಕೋಮುವಾದಿ ರಾಜಕಾರಣ ಎದುರಿಸಲು ಸಾಧ್ಯವಾಗಲಿಲ್ಲ ಎಂಬುದು ತುಂಬಾ ನೋವುಂಟು ಮಾಡಿದೆ. ನಾಲ್ಕು ವರ್ಷಗಳಲ್ಲಿ ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷನಾಗಿ ನನ್ನಿಂದ ಸಾಧ್ಯವಾದಷ್ಟೂ ಅತ್ಯುತ್ತಮವಾದುದ್ದನ್ನೇ ಮಾಡಿದ್ದೇನೆ'' ಎಂದು ಪತ್ರದಲ್ಲಿ ಸೋನಿಯಾ ಗಾಂಧಿ ಅವರಿಗೆ ತಿಳಿಸಿದ್ದಾರೆ.