ಬೆಂಗಳೂರು, ಮೇ.03 (DaijiworldNews/PY): ಕೊರೊನಾ ನಿಯಂತ್ರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣ ಬಗ್ಗೆ ಕೈಗೊಳ್ಳುವ ಕ್ರಮದ ಬಗ್ಗೆ ಪರಾಮರ್ಶಿಸಲು ಟಾಸ್ಕ್ ಫೋರ್ಸ್ ಅನ್ನು ಪುನರ್ ರಚಿಸಿದೆ.
ಡಿಸಿಎಂ ಕಾರಜೋಳ ಅವರ ಬದಲಿಗೆ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರದ ಉಪಕಾರ್ಯದರ್ಶಿ ಬಿ.ಎಸ್.ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಿರುವ ಬಗ್ಗೆ ಕೈಗೊಳ್ಳುವ ಕ್ರಮಗಳ ಕುರಿತು ಪರಾಮರ್ಶೀಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಟಾಸ್ಕ್ ಫೋರ್ಸ್ ತಂಡದ ಅಧ್ಯಕ್ಷರಾಗಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್, ಸದಸ್ಯರಾಗಿ ಸಚಿವರುಗಳಾದ ಆರೋಗ್ಯ ಸಚಿವ ಕೆ.ಸುಧಾಕರ್, ಸುರೇಶ್ ಕುಮಾರ್ ಹಾಗೂ ಸಿ.ಸಿ ಪಾಟೀಲ್ ಅವರನ್ನೊಳಗೊಂಡ ಟಾಸ್ಕ್ ಫೋರ್ಸ್ ಅನ್ನು ಪುನರ್ ರಚಿಸಲಾಗಿದೆ.