ತುಮಕೂರು, ಮೇ. 03 (DaijiworldNews/HR): ಕೊರೊನಾ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಚುಚ್ಚುಮದ್ದನ್ನು ಕಾಳಸಂತೆಯಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಸಿದ್ಧಗಂಗಾ ಆಸ್ಪತ್ರೆಯ ಇಬ್ಬರು ನೌಕರರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಬಂಧಿತ ಆರೋಪಿಗಳನ್ನು ಸಿದ್ಧಗಂಗಾ ಆಸ್ಪತ್ರೆ ಮಾರುಕಟ್ಟೆ ವಿಭಾಗದಲ್ಲಿ ಕೆಲಸ ಮಾಡುವ ಸೈಯ್ಯದ್ ಹರ್ಷದ್, ಸಿಟಿ ಎಕ್ಸರೇ ವಿಭಾಗದಲ್ಲಿ ಕೆಲಸ ಮಾಡುವ ರಖೀಬ್ ಹಾಗೂ ಸೂರ್ಯ ಎಮ್ದು ಗುರುತಿಸಲಾಗಿದೆ.
ನಗರದ ಗುಂಚಿ ವೃತ್ತದಲ್ಲಿ ಚುಚ್ಚುಮದ್ದು ಮಾರಾಟ ಮಾಡುವ ಸಮಯದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು 100 ಎಂ.ಜಿ.ಯ ಮೂರು ರೆಮ್ಡಿಸಿವಿರ್ ಚುಚ್ಚುಮದ್ದು ವಶಪಡಿಸಿಕೊಂಡಿದ್ದು, 4,700 ಬೆಲೆ ಬಾಳುವ ಚುಚ್ಚುಮದ್ದನ್ನು 17 ಸಾವಿರಕ್ಕೆ ಮಾರಾಟ ಮಾಡುತ್ತಿದ್ದು, ತನಿಖೆ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.