ರಾಯ್ಪುರ್,ಮೇ. 03 (DaijiworldNews/HR): ಛತ್ತೀಸ್ ಘರ್ ರಾಯ್ಪುರ್ ಜಿಲ್ಲೆಯಲ್ಲಿ ಸ್ಯಾನಿಟೈಸರ್ ಸೇವಿಸಿ ಇಬ್ಬರು ಮೃತಪಟ್ಟು, ಮತ್ತಿಬ್ಬರು ಅನಾರೋಗ್ಯಕ್ಕೆ ಒಳಗಾಗಿರುವ ಘಟನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಮೃತರನ್ನು ರಾಜು ಚುರಾ ಮತ್ತು ವಿಜಯ್ ಕುಮಾರ್ ಚೌಹಾಣ್ ಎಂದು ಗುರುತಿಸಲಾಗಿದೆ.
ಈ ಘಟನೆ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸಮೀಪವಿರುವ ಪ್ರದೇಶದಲ್ಲಿ ರವಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮದ್ಯ ಸಿಗದ ಕಾರಣ ನಾಲ್ವರು ಸ್ಯಾನಿಟೈಸರ್ ಸೇವಿಸಿದ್ದು, ಅವರೆಲ್ಲಾ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬಳಿಕ ಡಾ ಬಿ ಆರ್ ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.