ಬೆಂಗಳೂರು, ಮೇ 03 (DaijiworldNews/SM) : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳವಾಗುವುದು ಮುಂದುವರೆದಿದ್ದು, ಸೋಮವಾರದಂದು ಒಂದೇ ದಿನ 44,438 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 16,46,303ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 239 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 16,250ಕ್ಕೆ ಏರಿಕೆಯಾಗಿದೆ. ಇಂದು ಒಟ್ಟು 20,901 ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಒಟ್ಟು ಗುಣಾಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 11,85,299ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 4,44,734 ಸಕ್ರೀಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 22,112 ಮಂದಿಗೆ ಸೋಂಕು ದೃಢಪಟ್ಟಿದೆ.