ನವದೆಹಲಿ, ಮೇ.04 (DaijiworldNews/HR): ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ಲಾಕ್ಡೌನ್ ಜಾರಿಗೊಳಿಸಲಾಗಿದ್ದು, ದೆಹಲಿ ಜನತೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.
ದೆಹಲಿಯಲ್ಲಿ 2 ತಿಂಗಳು ಉಚಿತ ರೇಷನ್, ಆಟೋ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಇನ್ನು ದೆಹಲಿಯಲ್ಲಿ ಈಗಾಗಲೇ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನತಗೆ ಪರಿಹಾರ ಘೋಷಣೆ ಮಾಡಿರುವುದಂತೆ ಸದ್ಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.