ಬೆಂಗಳೂರು, ಮೇ.04 (DaijiworldNews/HR): ಮೇ 12 ರ ವರೆಗೆ ಜನತಾ ಕರ್ಫ್ಯೂ ಇರಲಿದ್ದು, ಲಾಕ್ಡೌನ್ ಮುಂದುವರೆಸುವ ಯೋಚನೆ ಸರ್ಕಾರದ ಮುಂದಿಲ್ಲ" ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಇಲ್ಲ. ಹಾಲಿ ಇರುವ ಕರ್ಫ್ಯೂ ಮುಂದುವರೆಯಲಿದೆ. ಪ್ರತಿಯೊಂದು ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳ ಹೊಣೆ ಹೊರಬೇಕು. ರಾಜ್ಯಕ್ಕೆ ಅಗತ್ಯ ಆಕ್ಸಿಜನ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದರು.
ಇನ್ನು ಮೇ.12ರವರೆಗೂ ಈಗ ಜಾರಿಯಲ್ಲಿರುವ ಕಠಿಣ ನಿಯಮಗಳೇ ಜಾರಿಯಲ್ಲಿದ್ದು, ಆ ಬಳಿಕ ಮುಂದಿನದ್ದು ಚರ್ಚಿಸಿ ನಿರ್ಧರಿಸುತ್ತೇವೆ. ಮಾನವ ಸಂಪನ್ಮೂಲವಾಗಿ ಅಂತಿಮ ವರ್ಷದ ಮೆಡಿಕಲ್ ವಿದ್ಯಾರ್ಥಿಗಳನ್ನು ಬಳಸುತ್ತೇವೆ. ಬೆಡ್ ಬ್ಲಾಕಿಂಗ್ನಲ್ಲಿ ಯಾರೇ ಭಾಗಿಯಾಗಿದ್ರೂ ಕ್ರಮ ಕೈಗೊಳ್ಳಲಿದ್ದು, ಈ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ." ಎಂದಿದ್ದಾರೆ.
ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಪ್ರಸ್ತಾಪಿಸಿದ ಸಿಎಂ ಯಡಿಯೂರಪ್ಪ, "ಸರ್ಕಾರಕ್ಕೆ ಸಲಹೆಗಳನ್ನು ಕೊಟ್ಟರೆ ಮುಕ್ತವಾಗಿ ಸ್ವೀಕರಿಸುತ್ತೇವೆ" ಎಂದರು.
ಇನ್ನು ಪತ್ರಕರ್ತರನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಘೋಷಿಸಿದ ಸಿಎಂ, ಪತ್ರಕರ್ತರಿಗೂ ಲಸಿಕೆ ನೀಡುವುದಾಗಿ ತಿಳಿಸಿದರು.