ಬೆಂಗಳೂರು, ಮೇ 04 (DaijiworldNews/SM): ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ವಿಸ್ತರಿಸಲಾಗಿದೆ. ಈ ನಡುವೆ ಪತ್ರಕರ್ತರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿಗಳ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಪತ್ರಕರ್ತರು ಫ್ರಂಟ್ ಲೈನ್ ವರ್ಕರ್ ಗಳಾಗಿದ್ದು, ಅವರು ಕೊರೋನಾ ವಾರಿಯರ್ಸ್ ಎಂಬುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಉಲ್ಲೇಖಿಸಿದ್ದಾರೆ. ಈ ನಡುವೆ ಪತ್ರಕರ್ತರಿಗೆ ಲಸಿಕೆ ನೀಡುವ ನಿಟ್ಟಿನಲ್ಲೂ ಕ್ರಮ ಕೈಗೊಳ್ಳಲಾಗುವುದೆಂದು ಸಿಎಂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.