ಬೆಂಗಳೂರು, ಮೇ.05 (DaijiworldNews/PY): "ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮೇ 5ರಿಂದ ಮೇ 7ರವರೆಗೆ ಗುಡುಗುಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ" ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
"ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲಲ್ಲಿ 64.5 ಮೀ.ಮೀಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವೂ ಕೂಡಾ ಅಧಿಕವಾಗಲಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ" ಎಂದು ಹವಾಮಾನ ಇಲಾಖೆ ತಿಳಿಸಿದೆ.
"ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಸೇರಿದಂತೆ ಚಿಕ್ಕಮಗಳೂರು, ಹಾಸನ, ಕೊಡಗು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ" ಎಂದು ಹೇಳಿದೆ.