ನವದೆಹಲಿ, ಮೇ 05 (DaijiworldNews/MS): ದೇಶದ ಕೋವಿಡ್ 19 ಸೋಂಕಿತರ ಸಂಖ್ಯೆ ಏರುಗತಿಯಲ್ಲೇ ಸಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ . ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿದ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 3.82 ಲಕ್ಷ ಹೊಸದಾಗಿ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 3780 ಮಂದಿ ಮೃತಪಟ್ಟಿದ್ದಾರೆ.
ದೇಶದ ಒಟ್ಟು ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಸದ್ಯ 34,87,229 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ದೇಶದಲ್ಲಿ ಒಟ್ಟು ಸಾವನ್ನಪ್ಪಿದ ಕೋವಿಡ್ 19 ಸೋಂಕಿತರ ಸಂಖ್ಯೆ 2,26,188ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ ಹೆಚ್ಚು ಸಾವು ಸಂಭವಿಸಿದೆ. 891 ಮಂದಿ ಸೋಂಕಿತರು ಮಹಾರಾಷ್ಟ್ರದಲ್ಲಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದಲ್ಲಿ 351 ಮಂದಿ ಮೃತಪಟ್ಟದ್ದಾರೆ.
ದೇಶದಲ್ಲಿ ಒಂದೇ ದಿನ 3,38,439 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 1,69,51,731ಕ್ಕೆ ತಲುಪಿದೆ