ಕೋಲ್ಕತ್ತಾ, ಮೇ.05 (DaijiworldNews/PY): ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಬುಧವಾರ ಮೂರನೇ ಬಾರಿ ಪಶ್ಚಿಮಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಕೋಲ್ಕತ್ತಾದ ರಾಜಭವನದಲ್ಲಿ ಸರಳವಾಗಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು. ಮಮತಾ ಬ್ಯಾನರ್ಜಿ ಅವರಿಗೆ ರಾಜ್ಯಪಾಲ ಜಗದೀಪ್ ಧನ್ಖಡ್ ಪ್ರತಿಜ್ಞಾವಿಧಿ ಬೋಧಿಸಿದರು.
ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೊರೊನಾ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಪ್ರಮಾಣವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿಯಿತು.
ಸಮಾರಂಭದಲ್ಲಿ ಟಿಎಂಸಿಯ ಚುನಾವಣೆಯ ರಣತಂತ್ರಗಾರ ಪ್ರಶಾಂತ್ ಕಿಶೋರ್, ಅಭಿಷೇಕ್ ಬ್ಯಾನರ್ಜಿ, ಪ್ರದೀಪ್ ಭಟ್ಟಾಚಾರ್ಯ ಹಾಗೂ ಕೆಲ ಟಿಎಂಸಿ ನಾಯಕರು ಭಾಗವಹಿಸಿದ್ದರು.