ಬೆಂಗಳೂರು, ಮೇ.05 (DaijiworldNews/PY): "ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದ ಬೆಡ್ ಬ್ಲಾಕ್ ದಂಧೆಯಲ್ಲಿ ಭಾಗಿಯಾದವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು" ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜಯನಗರ ವ್ಯಾಪ್ತಿಯಲ್ಲಿ ದಾಖಲಾಗಿರುವ ಪ್ರಕರಣವನ್ನು ಇದೀಗ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಸಿಸಿಬಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಈ ಒಂದು ವಲಯ ಮಾತ್ರವಲ್ಲ, ಬಿಬಿಎಂಪಿಯ ಎಲ್ಲಾ ವಲಯ ಆಗಿರಬಹುದು" ಎಂದಿದ್ದಾರೆ.
"ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮಾಡಲಾಗಿದೆ. ಮತ್ತಷ್ಟು ಜನರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ" ಎಂದು ಹೇಳಿದ್ದಾರೆ.
ಅಕ್ರಮವಾಗಿ ಬೆಡ್ ಬುಕಿಂಗ್ ಮಾಡುತ್ತಿದ್ದ ಮಾಫಿಯಾವನ್ನು ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದು, ಬಿಬಿಎಂಪಿ ಬೆಡ್ಗಳನ್ನು ಅಕ್ರಮವಾಗಿ ಬುಕ್ ಮಾಡುತ್ತಿದೆ . ಅಲ್ಲದೆ, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದರು.