ಬೆಂಗಳೂರು, ಮೇ.05 (DaijiworldNews/PY): ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಹಿನ್ನೆಲೆ ಕೊರೊನಾ ಸೋಂಕಿತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಸ್ಪತ್ರೆಯ, ಚಾಮರಾಜನಗರ ಜಿಲ್ಲಾಧಿಕಾರಿ, ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿನ ಎಲ್ಲಾ ದಾಖಲೆಗಳನ್ನು ಶೀಘ್ರವೇ ಸೀಜ್ ಮಾಡುವಂತೆ ಹೈಕೋರ್ಟ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದೆ.
ಈ ಕುರಿತು ಆದೇಶ ನೀಡಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, "ಸರ್ಕಾರ ನೇಮಿಸಿದ ತನಿಖಾಧಿಕಾರಿ ಸೀಜ್ ಮಾಡಿದ ದಾಖಲೆಗಳನ್ನು ಪರಿಶೀಲನೆ ಮಾಡಬಹುದು" ಎಂದಿದ್ದಾರೆ.
"24 ಕೊರೊನಾ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿರುವ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ಸರ್ಕಾರ ಸಿದ್ದ. ನಿವೃತ್ತ ನ್ಯಾಯಮೂರ್ತಿಯೊಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ" ಎಂದು ಅಡ್ವೋಕೇಟ್ ಜನರಲ್ ಹೈಕೋರ್ಟ್ಗೆ ತಿಳಿಸಿದ್ದಾರೆ.
ನ್ಯಾಯಮೂರ್ತಿ ಅವರು ಅಡ್ವೋಕೇಟ್ ಜನರಲ್ ಅವರ ಹೇಳಿಗೆ ಪ್ರತಿಕ್ರಿಯೆ ನೀಡಿದ್ದು, "ನ್ಯಾಯಾಂಗ ತನಿಖೆಯ ಬಗ್ಗೆ ನಿಲುವು ತಿಳಿಸಲು ಮಾತ್ರವೇ ಹೇಳಿದ್ದೆವು. ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ವಿಚಾರವನ್ನು ಹೈಕೋರ್ಟ್ಗೆ ಬಿಡಿ" ಎಂದಿದ್ದಾರೆ.
"ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ನಿರ್ಧಾರ ಹೈಕೋರ್ಟ್ಗೆ ಬಿಟ್ಟಿದ್ದು" ಎಂದು ಅಡ್ವೋಕೇಟ್ ಜನರಲ್ ತಿಳಿಸಿದ್ದಾರೆ.