ಬೆಂಗಳೂರು, ಮೇ 05 (DaijiworldNews/MS): ಕೊರೊನಾ ಸಾಂಕ್ರಮಿಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿರುವ ಬಗ್ಗೆ ಖಚಿತಪಡಿಸಿದ ಸಚಿವರು ಪ್ರಾಥಮಿಕ ಶಾಲೆಗಳಿಗೆ ಹಿಂದೆ ತಿಳಿಸಲಾದಂತೆ ಜೂ.14ರವರೆಗೆ ಬೇಸಿಗೆ ರಜೆ, ಪ್ರೌಢ ಶಾಲೆಗಳಿಗೆ ಏ. 27ರಿಂದ ಮೇ 31ರವರೆಗೆ ಬೇಸಿಗೆ ರಜೆ ಘೋಷಿಸಲಾಗಿದೆ ಎಂದಿದ್ದಾರೆ.
ಪ್ರೌಢಶಾಲಾ ಶಿಕ್ಷಕರು ರಜೆ ಅವಧಿಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು, ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ. ಅದನ್ನು ಶಿಕ್ಷಕರು ಪರಿಪಾಲಿಸಬೇಕೆಂದಿದ್ದಾರೆ.
ಜೂ.1 ರಿಂದ ರಿಂದ ಜೂ14ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪುನರ್ಮನನ ತರಗತಿಗಳು ನಡೆಯಲಿವೆ. ಜೂ.21 ರಿಂದ ಜೂ.5ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿವೆ. 1ರಿಂದ 10 ನೇ ತರಗತಿವರೆಗಿನ 2021-2022 ಶೈಕ್ಷಣಿಕ ವರ್ಷ ಜೂನ್15 ರಿಂದ ಪ್ರಾರಂಭವಾಗಲಿವೆ ಎಂದು ಹೇಳಿದ್ದಾರೆ.